ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಳೆ ನಿಂತರೂ ಮಳೆಯಿಂದ ಭಾರೀ ಅವಾಂತರಗಳು ಸಂಭವಿಸುತ್ತಲೇ ಇದೆ. ಸಂತೆಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ-66ರ ಸರ್ವಿಸ್ ರಸ್ತೆ(Road Collapse) ಕುಸಿದಿದೆ. ಐದಾರು ದಿನಗಳಿಂದ ಸುರಿದ ಮಳೆಗೆ ಮಣ್ಣು ಸಡಿಲಗೊಂಡಿದ್ದು ಬಹುಮಹಡಿ ಕಟ್ಟಡದ ಮುಂದಿನ ಸರ್ವಿಸ್ ರಸ್ತೆ ಕುಸಿದಿದೆ. ಉಡುಪಿ ಸಂತೆಕಟ್ಟೆಯ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿಯ ಮಣ್ಣು ಕುಸಿದು ಸರ್ವೇ ರಸ್ತೆ ಹಾಗೂ ತಡೆಗೋಡೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
ಅವಜ್ಞಾನಿಕ ಕಾಮಗಾರಿಯಿಂದಾಗಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಮಣ್ಣು ಕುಸಿದಿದ್ದು ಇಲ್ಲಿ ನೂರಾರು ಕುಟುಂಬಗಳು ಸಂಪರ್ಕ ಕಡಿತದ ಭೀತಿ ಎದುರಿಸುತ್ತಿದೆ. ಅಧಿಕಾರಿಗಳು ಹಾಗೂ ಸಂಸದರ ನಿರ್ಲಕ್ಷದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಕೂಡಲೇ ಇದಕ್ಕೆ ಪರಿಹಾರ ಕಂಡುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರಿಂಗ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.