ಬೆಂಗಳೂರು ;– ಆಶಾ ಕಾರ್ಯಕರ್ತೆಯರಿಗೆ ಪಿಂಚಣಿ ಸೌಲಭ್ಯ ಇಲ್ಲ, ಗ್ಯಾರಂಟಿಗಳು ಸಿಗಲಿವೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ಖಾಯಂ ನೌಕರರಲ್ಲ ಹಾಗಾಗಿ ಅವರಿಗೆ ಪಿಂಚಣಿ ವ್ಯವಸ್ಥೆ ಕಲ್ಪಿಸಲು ಸಾಧ್ಯವಿಲ್ಲ, ಆದರೆ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳೆಲ್ಲವೂ ಅವರಿಗೆ ಅನ್ವಯವಾಗಲಿವೆ ಎಂದರು.
ಆಶಾ ಕಾರ್ಯಕರ್ತೆಯರ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ, ಅವರು ಸ್ವಯಂ ಪ್ರೇರಿತರಾಗಿ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ರಾಜ್ಯ ಸರ್ಕಾರ ಅವರಿಗೆ ಐದು ಸಾವಿರ ರೂ.ಗೌರವಧನ ಕೊಡುತ್ತಿದೆ, ಇದರ ಜೊತೆಗೆ 5 ರಿಂದ 8 ಸಾವಿರ ಅವರ ಕೆಲಸದ ಆಧಾರದಲ್ಲಿ ಇನ್ಸೆಂಟಿವ್ ಸಿಗಲಿದೆ. ಇನ್ಸೆಂಟಿವ್ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡರ ಪಾಲೂ ಇದೆ. ಆದರೆ, ಅವರಿಗೆ ಪಿಂಚಣಿ ನೀಡಲಾಗಲ್ಲ, ಅವರು ಖಾಯಂ ನೌಕರರಲ್ಲದ ಕಾರಣ ಅವರಿಗೆ ಪಿಂಚಣಿ ನೀಡುವ ಪ್ರಸ್ತಾಪ ಸದ್ಯಕ್ಕೆ ಇಲ್ಲ. ಈಗಿರುವ ಪ್ರಕಾರ ಕೊಡಲು ಸಾಧ್ಯವೂ ಇಲ್ಲ. ಭವಿಷ್ಯದಲ್ಲಿ ಪರಿಶೀಲನೆ ಮಾಡಲಾಗುತ್ತದೆ ಎಂದು ಹೇಳಿದರು.