ಬೆಂಗಳೂರು ;- ಜನಸಾಮನ್ಯರಿಗೆ ಬಿಗ್ ಶಾಕ್ ಎದುರಾಗಿದ್ದು, ಸದ್ಯಕ್ಕೆ ಟೊಮೆಟೊ ಕಡಿಮೆ ಆಗಲ್ಲ. ರಾಜ್ಯ ಸೇರಿ ದೇಶಾದ್ಯಂತ ಟೊಮೆಟೊ ಬೆಲೆ 100 ರೂ. ಗಡಿ ದಾಟಿದ್ದು, ಇನ್ನೂ ಒಂದರಿಂದ ಎರಡು ತಿಂಗಳ ಕಾಲ ಟೊಮೆಟೊ ಬೆಲೆ ಕಡಿಮೆ ಆಗುವ ಲಕ್ಷಣಗಳು ಕಾಣುತ್ತಿಲ್ಲ.
ಹೊಸ ಬೆಳೆ ಬಂದ ಮೇಲೆ ಮಾತ್ರ ಬೆಲೆ ಕಡಿಮೆಯಾಗುವ ಸಂಭವವಿದ್ದು, ಈ ಹೊಸ ಬೆಳೆ ಬರಬೇಕಾದ್ರೆ ಒಂದರಿಂದ ಎರಡು ತಿಂಗಳು ಬೇಕು. ಹೀಗಾಗಿ ಇದೇ ಬೆಲೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಮಳೆ ಕೊರತೆಯಿಂದಾಗಿ ಟೊಮೆಟೊ ಬೆಲೆಯಲ್ಲಿ ಏರಿಕೆಗೆ ಕಾರಣವಾಗಿದ್ದು, ಉತ್ತರ ಪ್ರದೇಶ, ಚತ್ತೀಸ್ ಘಡ ರಾಜ್ಯಗಳಲ್ಲಿ ಟೊಮೆಟೊ ಬೆಳೆ ಈ ವರ್ಷ ಕಡಿಮೆಯಾಗಿದೆ. ಹೀಗಾಗಿ ಈ ಭಾಗಗಳಿಂದ ಕರ್ನಾಟಕಕ್ಕೆ ಹೆಚ್ಚಿನ ಬೇಡಿಕೆ ಬಂದಿದ್ದು, ಕರ್ನಾಟಕದಿಂದ ಈ ಭಾಗಗಳಿಗೆ ಟೊಮೆಟೊ ರಪ್ತು ಮಾಡುತ್ತಿರುವುದರಿಂದ ಬೆಲೆ ಏರಿಕೆಯಾಗಿದೆ.