ಬೆಂಗಳೂರು: ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆಯ ಹಿಂದೆ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಕೈವಾಡವಿದೆಯೆಂದು ಚಕ್ರವರ್ತಿ ಸೂಲಿಬೆಲೆ ಆರೋಪ ಮಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು ಆತನೊಬ್ಬ ದಲಿತ ಕಾರ್ಯಕರ್ತನಾಗಿದ್ದು, ಆತನ ಸಾಮರ್ಥ್ಯದಿಂದ ತುಂಬಾ ಹೆಸರು ಮಾಡಿದ್ದ. ಆತ ಬೆಳೆದ ಎಂಬ ಕಾರಣಕ್ಕೆ ಮಹದೇವಪ್ಪ ಮಗ ಸುನೀಲ್ಬೋಸ್ ತನ್ನ ಸಹಚರರಿಂದ ಈ ಕೆಲಸ ಮಾಡಿಸಿದ್ದಾರೆ ಎಂದು ವೇಣುಗೋಪಾಲ್ ಮನೆಯವರು, ಸ್ನೇಹಿತರು ಹೇಳುತ್ತಿದ್ದಾರೆ ಎಂದು ಆರೋಪ ಮಾಡಿದರು ಹಾಗೆ ಪುನೀತ್ ರಾಜ್ಕುಮಾರ್(Puneeth Rajkumar) ಫೋಟೋವೊಂದು ಈ ಕೊಲೆಗೆ ಕಾರಣನೇ ಅಲ್ಲ ಎಂದು ಅವರು ಹೇಳಿದ್ದಾರೆ.
ವೇಣುಗೋಪಾಲ್ ಮೃತದೇಹವನ್ನು ನೋಡಲು ತೆರಳಿದ ಮೊದಲ ದಿನವೇ ಟಿ ನರಸಿಪುರದ ಸ್ನೇಹಿತರು ಈ ಕೃತ್ಯವನ್ನು ಸುನಿಲ್ ಬೋಸ್ ಕಡೆಯವರು ಮಾಡಿದ್ದಾರೆ ಎಂದು ಹೇಳಿದ್ದರು. ಆದರೆ ಅಧಿಕೃತ ದಾಖಲೆಗಳು ಇಲ್ಲದೇ ಹೇಳುವುದು ಸರಿಯಲ್ಲ ಎಂದು ನಾನು ಹೇಳಲಿಲ್ಲ. ಆದರೆ ಈಗ ಸುನಿಲ್ ಬೋಸ್ ಜೊತೆಗೆ ಆರೋಪಿಗಳ ಇರುವ ಸಂಬಂಧ, ಫೋಟೋಗಳು ಎಲ್ಲವನ್ನು ನೋಡಿದಾಗ ಇದು ದೃಢವಾಗುತ್ತದೆ. ಹತ್ಯೆ ಮಾಡಿದ ಆರೋಪಿಗಳು ಕಾಂಗ್ರೆಸ್ ಪಕ್ಷ ಕಾರ್ಯಕರ್ತರು ಎಂದು ಹೇಳಿದರು.