ಬೆಂಗಳೂರು ;- ನಗರದಲ್ಲಿ ಹಾಡಹಗಲೇ ಏರೋನಿಕ್ಸ್ ಕಂಪನಿ CEO, MD ಬರ್ಬರ ಹತ್ಯೆ ನಡೆದಿದೆ. ಕಂಪನಿಯ MD ಫಣೀಂದ್ರ ಹಾಗೂ CEO ವಿನಯ್ ಕುಮಾರ್ ಎಂಬುವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಕಂಪನಿಯ ಮಾಜಿ ಉದ್ಯೋಗಿ ಫೆಲಿಕ್ಸ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಕಂಪನಿ ಬಿಟ್ಟು ಸ್ವಂತ ಉದ್ಯೋಗ ಶುರು ಮಾಡಿದ ಫೆಲಿಕ್ಸ್ ಈ ಕೃತ್ಯ ಎಸಗಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.