ಬೆಂಗಳೂರು ;- ಜೈನ ಮುನಿ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡುವ ಅಗತ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಜೈನ ಮುನಿ ಕೊಲೆ ಅಮಾನುಷವಾದದ್ದು. ಯಾರೇ ಕೊಲೆ ಮಾಡಿದರೂ ಶಿಕ್ಷೆ ಆಗಬೇಕು. ಎಫ್ಐಆರ್ನಲ್ಲಿಯೂ ಇಬ್ಬರ ಹೆಸರನ್ನು ಹಾಕಲಾಗಿದೆ. ಹಾಗಾಗಿ ಎರಡನೇ ಆರೋಪಿಯನ್ನು ರಕ್ಷಣೆ ಮಾಡುವ ಪ್ರಶ್ನೆನೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇದರಲ್ಲಿ ಪೊಲೀಸರ ತಪ್ಪು ಎಲ್ಲಿದೆ? ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ಜೈನ ಮುನಿ ಕೊಲೆ ಮಾಡಿರುವುದು ದಿಗ್ಬ್ರಮೆ ಮೂಡಿಸುವ ಕೊಲೆಯಾಗಿದೆ. ಇಂತಹದ್ದು ಮರುಕಳಿಸಬಾರದು. ಪೊಲೀಸರು ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದಾರೆ. ಯಾರಿಗೂ ರಕ್ಷಣೆ ಕೊಡುವ ಪ್ರಶ್ನೆನೇ ಇಲ್ಲ. ಇಲ್ಲಿ ಎಷ್ಟೇ ದೊಡ್ಡವರು ಇದ್ದರೂ ರಕ್ಷಣೆ ಮಾಡುವ ಪ್ರಶ್ನೆನೇ ಇಲ್ಲ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಯಾರೇ ತಪ್ಪಿತಸ್ಥರು ಇದ್ದರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನು ಟಿ ನರಸೀಪುರ, ಜೇವರ್ಗಿ ಪ್ರಕರಣ ಆಗಲಿ ಯಾವ ಪ್ರಭಾವಕ್ಕೂ, ಒತ್ತಡಕ್ಕೂ ಮಣಿಯಲ್ಲ. ಈಗ ಸಿಬಿಐಗೆ ಕೊಡುವ ಅಗತ್ಯ ಇಲ್ಲ. ಪೊಲೀಸರ ಕೈಯಲ್ಲೇ ಗಂಭೀರವಾಗಿ ತನಿಖೆ ಮಾಡಿಸುತ್ತೇವೆ ಎಂದರು.