ಬೆಂಗಳೂರು ;– ಗೃಹಜ್ಯೋತಿ ವಿಚಾರವಾಗಿ ಪ್ರತಿಪಕ್ಷಗಳಿಂದ ಅಪಪ್ರಚಾರ ನಡೆಯುತ್ತಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.
ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳು ಗೃಹಜ್ಯೋತಿ ವಿಷಯವಾಗಿ ಪ್ರತಿಪಕ್ಷಗಳು ಅನಗತ್ಯವಾದ ಸುಳ್ಳು ಪ್ರಚಾರ ಮಾಡುತ್ತಿದೆ ಎಂದರು.
ರಾಜ್ಯದಲ್ಲಿ 2.16 ಕೋಟಿ ಆರ್ ಆರ್ ಸಂಖ್ಯೆಗಳಿವೆ. ಅದರಲ್ಲಿ 2.14 ಕೋಟಿ ಸಂಪರ್ಕಗಳು ಗೃಹಜ್ಯೋತಿಗೆ ಅರ್ಹತೆ ಪಡೆದಿವೆ ಎಂದು ಸ್ಪಷ್ಟಪಡಿಸಿದರು.
200 ಯುನಿಟ್ವರೆಗೆ ಬಳಕೆಯಾಗುವ ವಿದ್ಯುತ್ಗೆ ವಾರ್ಷಿಕ ಸರಾಸರಿ ಪರಿಗಣಿಸಿ ಸೌಲಭ್ಯ ನೀಡಲಾಗುತ್ತಿದೆ. ಈವರೆಗೂ 1 ಕೋಟಿಗೂ ಹೆಚ್ಚು ಮಂದಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಯೋಜನೆಯಡಿ ಸುಮಾರು 40 ಲಕ್ಷ ಗ್ರಾಹಕರಿದ್ದಾರೆ. ಅವರನ್ನೂ ಗೃಹಜ್ಯೋತಿ ವ್ಯಾಪ್ತಿಗೆ ಒಳಪಡಿಸಿದರೆ ನೋಂದಣಿಯಾಗುವ ಗ್ರಾಹಕರ ಸಂಖ್ಯೆ ಹೆಚ್ಚಾಗಲಿದೆ ಎಂದು ಹೇಳಿದರು.