ಬೆಂಗಳೂರು : ಗೃಹಜ್ಯೋತಿ ಯೋಜನೆಯ ನೊಂದಣಿಗೆ ಇಂಧನ ಸಚಿವ ಕೆಜೆ ಜಾರ್ಜ್ ಅವರು ಗಡುವು ನೀಡಿದ್ದಾರೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಮೊದಲು ಕಡೆಯ ದಿನಾಂಕವನ್ನು ನಿಗದಿಪಡಿಸಿರಲಿಲ್ಲ. ಈಗ, ಕಡೆಯ ದಿನಾಂಕವನ್ನು ನಿಗದಿಪಡಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದರು.
ಅದರಂತೆ, ಜುಲೈ 27ರಂದು ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿರುತ್ತದೆ” ಎಂದು ಹೇಳಿದರು.
ಸರ್ಕಾರ ನೀಡಿದ ಗಡುವಿನೊಳಗೆ ಅರ್ಜಿ ಸಲ್ಲಿಕೆ ಮಾಡದಿದ್ದರೆ ಜನರು ಯಾವುದೇ ಆತಂಕ ಪಡಬೇಕಿಲ್ಲ. ಸಚಿವರು, “ಯೋಜನೆ ವ್ಯಾಪ್ತಿಯಿಂದ ಹೊರಗುಳಿದವರನ್ನು ಯೋಜನೆಯೊಳಕ್ಕೆ ತರಲು ಗೃಹಜ್ಯೋತಿ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕದ ನಂತರ ಎರಡು ತಿಂಗಳವರೆಗೆ ವಿದ್ಯುತ್ ಅದಾಲತ್ ನಡೆಸಲಾಗುವುದು” ತಿಳಿಸಿದ್ದಾರೆ.