ಹಾಸನ: ಕಾಂಗ್ರೆಸ್ ಸರ್ಕಾರ (Congress Government) ಘೋಷಣೆ ಮಾಡಿರುವ 5 ಗ್ಯಾರಂಟಿಗಳನ್ನ ಜಾರಿಗೆ ತರುವುದು ನಮ್ಮ ಮೊದಲ ಆದ್ಯತೆ ಎಂದು ಸಚಿವ ಕೆ.ಎನ್ ರಾಜಣ್ಣ (KN Rajanna) ಹೇಳಿದ್ದಾರೆ. ಬಜೆಟ್ನಲ್ಲಿ (Budget 2023) ಹಾಸನ ಜಿಲ್ಲೆಗೆ ಏನೂ ಸಿಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು,
ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. 5 ಗ್ಯಾರಂಟಿಗಳನ್ನ (Congress Guarantee) ಘೋಷಣೆ ಮಾಡಿದ್ದೇವೆ. ಅದನ್ನ ಜಾರಿಗೊಳಿಸುವುದು ನಮ್ಮ ಮೊದಲ ಆದ್ಯತೆ. ಮುಂದಿನ ದಿನಗಳಲ್ಲಿ ಬೇರೆ ಕೆಲಸಗಳಿಗೆ ಆದ್ಯತೆ ನೀಡುತ್ತೇವೆ ಹೇಳಿದ್ದಾರೆ.
ಬಿಜೆಪಿ ವಿರುದ್ಧ ವಾಗ್ದಾಳಿ:
ಗೃಹಲಕ್ಷ್ಮಿ ಯೋಜನೆ ರಾಜ್ಯದ ಜನರಿಗೆ ಭ್ರಮನಿರಸನ ತಂದಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಬೊಮ್ಮಾಯಿ ಹೇಳುವುದನ್ನ ಏಕೆ ಕೇಳ್ತೀರಾ? ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ಆಯ್ಕೆ ಮಾಡಿಕೊಳ್ಳುವ ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೇಲ್ಮನೆ, ಕೆಳಮನೆಯಲ್ಲಿ ವಿರೋಧ ಪಕ್ಷದ ನಾಯಕರೇ ಇಲ್ಲ. ರಾಷ್ಟ್ರೀಯ ಪಕ್ಷವೇ ನಾಯಕನನ್ನ ಆಯ್ಕೆ ಮಾಡದಿರುವುದು ವಿಪರ್ಯಾಸ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಟೀಕಿಸಿದ್ದಾರೆ.