ಮಂಡ್ಯ: ಕಾವೇರಿ ನೀರಿಗಾಗಿ ತಮಿಳುನಾಡಿನಿಂದ ಮತ್ತೆ ಕ್ಯಾತೆ ತೆಗೆದಿರುವ ಬಗ್ಗೆ ಮಾತನಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ನೀರು ಹರಿಸುವಂತೆ ನಿರ್ವಹಣಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದೆ. ಮಾನಿಟರ್ ಕಮಿಟಿ ಮುಂದೆ ತಮಿಳುನಾಡು ಮನವಿ ಮಾಡಿದೆ. ಇಲ್ಲಿ ನೀರಿನ ಸಮಸ್ಯೆ ಇದೆ,
ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ. ನಮ್ಮಲ್ಲೇ ಬೆಳೆಗಳಿಗೂ ಸಮಸ್ಯೆಯಾಗುತ್ತಿದೆ ಎಂದರು. ಮಂಡ್ಯ ನಗರದಲ್ಲಿ ಮಾತನಾಡಿದ ಅವರು, ನೀರಾವರಿ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದ ಬಳಿಕ ತೀರ್ಮಾನ ಮಾಡುತ್ತೇವೆ ಎಂದರು.