ಬೆಂಗಳೂರು ;- ರಾಜಧಾನಿ ಬೆಂಗಳೂರಿನಲ್ಲಿ ನಾಳೆಯಿಂದ ಎರಡು ದಿನ ವಿಪಕ್ಷಗಳ ಸಭೆ ನಡೆಯಲಿದೆ. ಈ ಹಿನ್ನೆಲೆ ನಗರದೆಲ್ಲೆಡೆ ಪೋಸ್ಟರ್ ಗಳು ರಾರಾಜಿಸುತ್ತಿವೆ.
ಸಭೆಯಲ್ಲಿ 24 ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಬಿಜೆಪಿಯ ವಿರುದ್ಧ ಒಗ್ಗಟ್ಟನ್ನು ಪ್ರದರ್ಶಿಸುವ ವಿಪಕ್ಷಗಳ ಸಭೆಗೆ ಎಂಟು ಹೊಸ ಪಕ್ಷಗಳು ತಮ್ಮ ಬೆಂಬಲವನ್ನು ನೀಡಿವೆ ಎಂದು ಮೂಲಗಳು ತಿಳಿಸಿವೆ. ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತಿತರ ನಾಯಕರ ಫೋಸ್ಟರ್ ಗಳು ರಾಜಧಾನಿಯಲ್ಲಿ ರಾರಾಜಿಸುತ್ತಿವೆ.
ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಕೇಂದ್ರದ ಸುಗ್ರೀವಾಜ್ಞೆಯನ್ನು ಬೆಂಬಲಿಸುವುದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡಾ ಈ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದ್ದು, ಅವರ ಫೋಸ್ಟರ್ ಕೂಡಾ ಕಂಡುಬಂದಿದೆ