ಬೆಂಗಳೂರು ;- ರಾಜ್ಯಾಧ್ಯಕ್ಷ ಸ್ಥಾನ ನೀಡದೆ ಇದ್ದಾಗ ಮುಂದಿನ ನಡೆ ತೀರ್ಮಾನಿಸುತ್ತೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಕಳೆದ 40 ವರ್ಷಗಳಿಂದ ರಾಜ್ಯ ರಾಜಕಾರಣದ ಆಗುಹೋಗುಗಳನ್ನು ತಿಳಿದಿದ್ದೇನೆ. ಪಕ್ಷಕ್ಕಾಗಿ ಸಾಕಷ್ಟು ಶ್ರಮಿಸಿದ್ದೇನೆ. 365 ದಿನವೂ ಜನರ ನಡುವೆ ಇದ್ದು, ಜನ ಸಂಘಟನೆ ಮಾಡಿದ್ದೇನೆ. ಹಾಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಕೇಳಿದ್ದೇನೆ. ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ದುಡಿಯುತ್ತೇನೆ. ಇಲ್ಲವಾದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ನಡೆ ಬಗ್ಗೆ ತೀರ್ಮಾನ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ.