ಹಾವೇರಿ ;– ಜು.18ರ ಬಳಿಕ ವಿಪಕ್ಷ ನಾಯಕನ ಆಯ್ಕೆ ತೀರ್ಮಾನ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಶ್ಯಾಡೊ ಸಿಎಂ ಚರ್ಚೆ ನಡೆದಿದೆ. ಈಗಾಗಲೇ ವಿಧಾನಸಭೆಯಲ್ಲಿ ಹಲವು ವಿಚಾರಗಳನ್ನು ಎತ್ತಿದ್ದೇವೆ. ಸಿಎಂ ಕಚೇರಿಯಿಂದ ಹಿಡಿದು ಎಲ್ಲಾ ಕಡೆಗೂ ಹೊರಗಿನವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ವರ್ಗಾವಣೆಯಲ್ಲಿ ನಾನು ಯಾವುದಕ್ಕೂ ಹಣ ತೆಗೆದುಕೊಂಡಿಲ್ಲ ಎಂದು ಸಿಎಂ ಹೇಳುತ್ತಿದ್ದಾರೆ. ಸಿಎಂ ಸ್ವಂತಕ್ಕೆ ಹಣ ತೆಗೆದುಕೊಂಡಿಲ್ಲ ಎಂದು ಜಾರಿಕೊಳ್ಳುತ್ತಿದ್ದಾರೆ. ಅವರ ಸರ್ಕಾರದ ಮಂತ್ರಿ ಮಂಡಲದ ಸದಸ್ಯರು, ಚೇಲಾಗಳು ತೆಗೆದುಕೊಳ್ಳುತ್ತಿರುವುದು ಸ್ಪಷ್ಟವಾಗಿದೆ ಎಂದರು.