ಬೆಂಗಳೂರು ;- ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯನ್ನು ಕಟ್ಟಿಹಾಕಲೇಬೇಕೆಂದು ದೇಶದ ಪ್ರತಿಪಕ್ಷಗಳೆಲ್ಲ ಒಗ್ಗಟ್ಟಿನ ಮಂತ್ರ ಪಠಿಸುತ್ತಿವೆ.ಇದಕ್ಕಾಗಿ ಇಂದು ಬೆಂಗಳೂರಿನಲ್ಲಿ ಶಕ್ತಿಪ್ರದರ್ಶನಕ್ಕೆ ಸಜ್ಜಾಗಿವೆ.
ಈ ಬಾರಿ ಒಟ್ಟು 24 ಪಕ್ಷಗಳಿಗೆ ಆಹ್ವಾನ ನೀಡಲಾಗಿದೆ. ಇಂದಿನ ಸಭೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಗರಾದಾದ್ಯಂತ ಫ್ಲೆಕ್ಸ್ಗಳು ರಾರಾಜಿಸುತ್ತಿವೆ.
ವಿಪಕ್ಷಗಳ ಒಕ್ಕೂಟದ ಸಭೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಜೊತೆಗೆ ಬಿಹಾರ ಸಿಎಂ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಜಾರ್ಖಂಡ್ನ ಹಾಲಿ ಸಿಎಂ ಹೇಮಂತ್ ಸೊರೇನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸಹ ಆಗಮಿಸಲಿದ್ದಾರೆ. ಅಷ್ಟೇ ಅಲ್ಲದೇ ಎನ್ಸಿಪಿಯ ಶರದ್ ಪವಾರ್, ಆರ್ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್, ಮಹಾರಾಷ್ಟ್ರ ಮಾಜಿ ಸಿಎಂ ಶಿವಸೇನೆಯ ಉದ್ಧವ್ ಠಾಕ್ರೆ, ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್, ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಓಮರ್ ಅಬ್ದುಲ್ಲಾ, CPI ನಾಯಕ ಡಿ.ರಾಜಾ. ಸಿಪಿಐಎಂ ನಾಯಕ ಸೀತಾರಾಂ ಯಚೂರಿ ಸೇರಿ ಹಲವು ನಾಯಕರು ಭಾಗವಹಿಸಲಿದ್ದಾರೆ. ಇವ್ರಲ್ಲಿ ಆರು ಜನ ಹಾಲಿ ಸಿಎಂಗಳಾಗಿದ್ರೆ. ಆರು ಜನ ಮಾಜಿ ಸಿಎಂಗಳು ಇರುವುದು ವಿಶೇಷವಾಗಿದೆ.