ಬೆಂಗಳೂರು;- ಇಂದಿನಿಂದ ರಾಜಧಾನಿ ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆ ನಡೆಯಲಿದ್ದು, ನಗರದ ಹಲವೆಡೆ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದೆ.
ವಿಧಾನಸೌಧದಲ್ಲಿ ಅಧಿವೇಶನ ಹಾಗೂ ತಾಜ್ ವೆಸ್ಟೆಂಡ್ ಹೊಟೇಲ್ನಲ್ಲಿ ಲೋಕಸಭಾ ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಈ ಹಿನ್ನೆಲೆ, ಬಿಆರ್ ಅಂಬೇಡ್ಕರ್ ರಸ್ತೆ, ಕಬ್ಬನ್ ರಸ್ತೆ, ಪ್ಯಾಲೆಸ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಶೇಷಾದ್ರಿ ರಸ್ತೆಗಳಲ್ಲಿ ವಾಹನ ಸವಾರರು ಸಂಚರಿಸದೆ ಪರ್ಯಾಯ ಮಾರ್ಗಗಳನ್ನ ಬಳಸುವಂತೆ ನಗರ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.
ಅಷ್ಟೇ ಅಲ್ಲದೆ, ಕೆಲವು ಕಡೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ. ಅಂಬೇಡ್ಕರ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ ಹಾಗೂ ರೇಸ್ ಕೋರ್ಸ್ ರಸ್ತೆಗಳಲ್ಲಿ ವಾಹನ ಪಾರ್ಕಿಂಗ್ಗೆ ನಿಷೇಧ ಹೇರಲಾಗಿದೆ.