ಮೈಸೂರು;- ಸಿಎಂ ಸಿದ್ದರಾಮಯ್ಯರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಯುವಕನನ್ನು ಅರೆಸ್ಟ್ ಮಾಡಲಾಗಿದೆ.
ರಂಜನೀಶ್ ಬಂಧಿತ ಯುವಕ ಎಂದು ಗುರುತಿಸಲಾಗಿದೆ. ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ ಸಂಬಂಧ ಸಿದ್ರಾಮುಲ್ಲಾ ಖಾನ್ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆಯಿಲ್ಲ. ಈ ಸರ್ಕಾರ ಬಂದ ಮೇಲೆ ಹಿಂದೂಗಳ ಮೇಲೆ ಸಲೀಸಾಗಿ ಕೊಲೆಗಳು ಆಗುತ್ತಿವೆ ಎಂದು ಪೋಸ್ಟ್ ಮಾಡಿದ್ದ ರಂಜನೀಶ್.
ಈ ಘಟನೆ ಸಂಬಂಧ ಸೈಬರ್ ಕ್ರೈಂಗೆ ದೂರು ನೀಡಿದ್ದ.ಮೆಲ್ಲಹಳ್ಳಿ ರವಿ. ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆ 504,505ನೇ (1)ಬಿ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಟಿ.ನರಸೀಪುರ ಪೋಲೀಸರು. ಯುವಕ ರಂಜನೀಶ್ರನ್ನ ಬಂಧಿಸಿ ಬಳಿಕ ಬೇಲ್ ಮೂಲಕ ಬಿಡುಗಡೆ ಮಾಡಿದ್ದಾರೆ.