ಬೆಂಗಳೂರು: ಇಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಮಹಾಘಟಬಂಧನ್ ಯಾಕೆ ಆಹ್ವಾನ ಕೊಟ್ಟಿಲ್ಲ ಅಂತ ಗೊತ್ತಿಲ್ಲ ಹಾಗೆ ಎನ್ಡಿಎ ಮೈತ್ರಿ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ನನಗೆ ಯಾರೂ ಕರೆ ಕೂಡ ಮಾಡಿಲ್ಲ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಘಟಬಂಧನ್ ಸಭೆಗೆ ಕಾಂಗ್ರೆಸ್ ಹಲವು ಪಕ್ಷಗಳ ನಾಯಕರಿಗೆ ಆಹ್ವಾನಿಸಿದ್ದಾರೆ. 123 ಸ್ಥಾನ ಬರದಿದ್ದರೆ ಜೆಡಿಎಸ್ ವಿಸರ್ಜನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದರು.
ನಾನು ಸದನದಲ್ಲಿ ವರ್ಗಾವಣೆ ದಾಖಲೆ ಬಿಡುಗಡೆ ಮಾಡಿದರೆ ನನ್ನ ಕಾಲದಲ್ಲಿ ವರ್ಗಾವಣೆಯಲ್ಲಿ ಕೋಟಿ ಕೋಟಿ ಹಣ ಪಡೆದಿದ್ದಾರೆ ಅಂತ ನನ್ನ ಮೇಲೆ ದಾಖಲೆ ಬಿಡುಗಡೆ ಮಾಡುತ್ತಿರಾ. ನನ್ನ ಕಾಲದಲ್ಲಿ ವರ್ಗಾವಣೆಗೆ ಲಂಚ ಪಡೆದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದರು.
ಹಾಗೆ ಜೆಡಿಎಸ್ನಿಂದ ಅವಕಾಶವಾದಿ ರಾಜಕಾರಣ ಎಂಬ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ವಿಚಾರವಾಗಿ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದು, ಇವರನ್ನ ಕೇಳಿ ನನ್ನ ಪಕ್ಷವನ್ನು ಮುನ್ನಡೆಸುವ ಅವಶ್ಯಕತೆ ಇಲ್ಲ. ನಾನು ಕಾಂಗ್ರೆಸ್ ಪಕ್ಷದ ಗುಲಾಮನಲ್ಲ ಎಂದು ತಿರುಗೇಟು ನೀಡಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ವರ್ಗಾವಣೆ ದಂಧೆ ಬಾಂಬ್ ಸಿಡಿಸಿದ್ದು, ವರ್ಗಾವಣೆಯಲ್ಲೇ 500 ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕೇವಲ 2 ತಿಂಗಳಲ್ಲೇ 500 ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ. ವರ್ಗಾವಣೆ ದಂಧೆ ಬಗ್ಗೆ ಓರ್ವ ಅಧಿಕಾರಿ ನನಗೆ ಮಾಹಿತಿ ನೀಡಿದ್ದಾರೆ ಎಂದರು.