ಬೆಂಗಳೂರು: ದೇಶದ ಆರ್ಥಿಕತೆಯನ್ನು ಹಾಳು ಮಾಡಿದ್ದೇ ಬಿಜೆಪಿಯವರು ಎಂದು ವಿಧಾನಸೌಧದಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು. ಮೋದಿ ಪ್ರಧಾನಿಯಾದ ಮೇಲೆ ಬೆಲೆ ಏರಿಕೆ, ಆರ್ಥಿಕತೆ ಹಾಳಾಗಿದೆ. ಜನರು ಬದುಕಲು ಸಾಧ್ಯವಾಗದ ರೀತಿಯಾಗಿದೆ ಎಂದರು.
ಬಿಜೆಪಿ ಮುಗಿಸಲು ವಿಪಕ್ಷಗಳು ಒಂದಾಗಿವೆ ಅನ್ನೋ ಆರೋಪ ವಿಚಾರವಾಗಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲಿಲ್ವಾ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ 28 ಕಡೆ ಪ್ರಧಾನಮಂತ್ರಿ ಮೋದಿ ಪ್ರಚಾರ ಮಾಡಿದ್ದರು. ಪ್ರಧಾನಿ ಮೋದಿ ಪ್ರಚಾರ ಮಾಡಿದ ಕಡೆಯಲ್ಲೆಲ್ಲಾ ನಾವು ಗೆದ್ದಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ & ಮಿತ್ರಪಕ್ಷಗಳು ಸೋಲಲಿವೆ ಎಂದರು.