ಬೆಂಗಳೂರು: ಪ್ರತಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆಮಾಕ್ರಟಿಕ್ ಇನ್ಕ್ಲೂಸಿವ್ ಅಲೈನ್ಸ್ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದರು. ‘I-N-D-I-A’ ಎಂದರೆ Indian National Development Inclusive Alliance ಕನ್ನಡದಲ್ಲಿ ಹೇಳೋದಾದ್ರೆ ಭಾರತೀಯ ರಾಷ್ಟ್ರೀಯ ಅಭಿವೃದ್ದಿ ಅಂತರ್ಗತ ಒಕ್ಕೂಟ ಎಂದು ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಪಡಿಸಿದರು.
2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾರಥ್ಯದ ಬಿಜೆಪಿ ಹಾಗೂ ಎನ್ಡಿಎ ಮೈತ್ರಿ ಕೂಟದ ವಿರುದ್ಧ ಹೋರಾಟ ನಡೆಸಲು ಸಜ್ಜಾಗಿರುವ ವಿರೋಧ ಪಕ್ಷಗಳು ತಮ್ಮ ಒಕ್ಕೂಟಕ್ಕೆ ‘I-N-D-I-A’ ಎಂಬ ಹೊಸ ಹೆಸರು ಇಟ್ಟಿವೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ವಿರೋಧಿ ರಾಜಕೀಯ ಪಕ್ಷಗಳ ಒಕ್ಕೂಟದ ಸಭೆಯಲ್ಲಿ ತಮ್ಮ ಒಕ್ಕೂಟ ಹೊಸ ಹೆಸರನ್ನು ಅಂತಿಮಗೊಳಿಸಲಾಗಿದೆ. ವಿಪಕ್ಷ ಒಕ್ಕೂಟದ ಸಭೆಯಲ್ಲಿ ಭಾಗವಹಿಸಿದ್ದ 26 ರಾಜಕೀಯ ಪಕ್ಷಗಳ ನಾಯಕರು ಈ ಹೊಸ ಹೆಸರಿಗೆ ಸಮ್ಮತಿ ಸೂಚಿಸಿದ್ದಾರೆ. ಅಷ್ಟೇ ಅಲ್ಲ, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕುವ ಕುರಿತಾಗಿ ರಣ ತಂತ್ರ ಸಜ್ಜಾಗುತ್ತಿದೆ.
26 ಪಕ್ಷಗಳು ಈ ಸಭೆಯಲ್ಲಿ ಭಾಗವಹಿಸಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿವೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಒಗ್ಗಟ್ಟಾಗಿ ಹೋರಾಡಲು ಯೋಜನೆ ರೂಪಿಸಿವೆ. ಈ ವೇಳೆ ಪ್ರಾಸ್ತಾವಿಕವಾಗಿ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಹಾಗೂ ಪ್ರಧಾನ ಮಂತ್ರಿ ಹುದ್ದೆ ಮೇಲೆ ಆಸಕ್ತಿಯಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತತೆ ಹಾಗೂ ಸಾಮಾಜಿಕ ನ್ಯಾಯ ಕಾಪಾಡುವ ಗುರಿ ಹೊಂದಿದ್ದೇವೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಹಾಗೂ ಪ್ರಧಾನ ಮಂತ್ರಿ ಹುದ್ದೆ ಮೇಲೆ ಆಸಕ್ತಿಯಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತತೆ ಹಾಗೂ ಸಾಮಾಜಿಕ ನ್ಯಾಯ ಕಾಪಾಡುವ ಗುರಿ ಹೊಂದಿದ್ದೇವೆ ಎಂದು ಹೇಳಿದ್ದಾರೆ. ರಾಜ್ಯ ಮಟ್ಟದಲ್ಲಿ ನಮ್ಮ ನಡುವೆ ಭಿನ್ನಾಭಿಪ್ರಾಯವಿರುವುದು ಗೊತ್ತಿದೆ. ಆದರೆ, ಅದು ಸೈದ್ಧಾಂತಿಕ ಭಿನ್ನಾಭಿಪ್ರಾಯ ಅಲ್ಲ. ಜನರಿಗೋಸ್ಕರ ಭಿನ್ನಾಭಿಪ್ರಾಯವನ್ನು ಪಕ್ಕಕ್ಕಿಡಬೇಕಾಗಿದೆ. ನಾವು 26 ಪಕ್ಷಗಳಿದ್ದು, 11 ರಾಜ್ಯಗಳಲ್ಲಿ ಅಧಿಕಾರದಲ್ಲಿ ಇದ್ದೇವೆ. ಬಿಜೆಪಿ ತಾನೊಂದೆ 303 ಸ್ಥಾನಗಳನ್ನು ಗೆದ್ದಿಲ್ಲ. ತನ್ನ ಮೈತ್ರಿ ಪಕ್ಷಗಳನ್ನು ಬಳಸಿಕೊಂಡು, ಆಮೇಲೆ ಬಿಸಾಡಿದೆ ಎಂದು ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರ ಎಲ್ಲಾ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿವೆ. ಎಲ್ಲಾ ತನಿಖಾ ಸಂಸ್ಥೆಗಳನ್ನು ವಿಪಕ್ಷಗಳ ವಿರುದ್ಧ ಅಸ್ತ್ರವಾಗಿ ಬಳಕೆ ಮಾಡುತ್ತಿದೆ. ಸಿಬಿಐ, ಇಡಿ, ಐಟಿ ಎಲ್ಲವನ್ನೂ ವಿರೋಧ ಪಕ್ಷಗಳನ್ನು ಹತ್ತಿಕ್ಕಲು ಬಳಕೆ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ