ಬೆಂಗಳೂರು: ವಿಧಾನಸಭೆ ಕಲಾಪದ ಸಂದರ್ಭ ಸದನದಲ್ಲಿ ಅಗೌರವ ತೋರಿದ 10 ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿದೆ. ಡಾ.ಅಶ್ವತ್ಥ್ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್.ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ಭರತ್ ಶೆಟ್ಟಿ ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ.
ಇದಕ್ಕೂ ಮುನ್ನ ಬಿಜೆಪಿ ಶಾಸಕರು ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರ ಎಸೆದಿದ್ದರು. ಈ ವಿಚಾರವಾಗಿ ಸದನದಲ್ಲಿ ಭಾರಿ ಗದ್ದಲ ಸೃಷ್ಟಿಯಾಗಿತ್ತು. ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ಸ್ಪೀಕರ್ಗೆ ದೂರು ನೀಡಿದ್ದರು. ಸಣ್ಣ ವಿಚಾರಕ್ಕೆ ಬಿಜೆಪಿಯವರು ಧರಣಿ ಮಾಡುತ್ತಾರೆ. ದಲಿತ ಅಧ್ಯಕ್ಷರ ಮೇಲೆ ಪೇಪರ್ ಎಸೆಯುತ್ತಾರೆ, ಹಲ್ಲೆಗೆ ಮುಂದಾಗುತ್ತಾರೆ. ಬಿಜೆಪಿಯವರು ಕ್ಷಮೆ ಕೇಳಬೇಕು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಆಗ್ರಹಿಸಿದ್ದರು.