ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು, ಭಯೋತ್ಪಾದನಾ ಚಟುವಟಿಕೆಗಳು, ಬೆಲೆಯೇರಿಕೆ, ಗ್ಯಾರಂಟಿ ಘೋಷಣೆ ಅನುಷ್ಠಾನದಲ್ಲಿ ವೈಫಲ್ಯ ಮತ್ತು ಬಿಜೆಪಿ ಶಾಸಕರ ಅಮಾನತು ವಿಚಾರವಾಗಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಅದು ಅಲ್ಲದೇ ಕಾಂಗ್ರೆಸ್ ಸರ್ಕಾರದಲ್ಲಿ ಸಮಾಜವಿರೋಧಿ ಶಕ್ತಿಗಳು ತಲೆ ಎತ್ತಿವೆ ಎಂದು ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿದರು. ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ವೇಳೆ ಮಾತನಾಡಿದ ಅವರು ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಟಿ.ನರಸೀಪುರದಲ್ಲಿ ಸಮಾಜದ್ರೋಹಿಗಳಿಂದ ವೇಣುಗೋಪಾಲ್ ಹತ್ಯೆಯಾಯಿತು, ಹಲವು ಕಡೆ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಅಶ್ವತ್ಥ್ ನಾರಾಯಣ ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ದಾರೆ.