ಬೆಂಗಳೂರು ;– ಸಿಎಂ ಸ್ಥಾನದ ಬಗ್ಗೆ ಸೋನಿಯಾ, ರಾಹುಲ್ ನಿರ್ಧಾರ ಮಾಡುತ್ತಾರೆ ಎಂದು ಹೇಳುವ ಮೂಲಕ ಬಿ.ಕೆ ಹರಿಪ್ರಸಾದ್ ಗೆ ಸಚಿವ ಜಮೀರ್ ಟಾಂಗ್ ಕೊಟ್ಟಿದ್ದಾರೆ.
ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತು ‘ ಎಂಬ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಈ ಕುರಿತು ಮಾತನಾಡಿದ ಜಮೀರ್, ಸಿಎಂ ಮಾಡೋದು ಬಿಡೋದು ಅವರ ಕೈಲೂ ಇಲ್ಲ, ನನ್ನ ಕೈಲೂ ಇಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಆ ನಿರ್ಧಾರವನ್ನು ಮಾಡುತ್ತಾರೆ ಎಂದರು. ಬಿಜೆಪಿ, ಜೆಡಿಎಸ್ ನಡುವೆ ಹೊಂದಾಣಿಕೆ ಬಗ್ಗೆ ಅವರನ್ನೇ ಕೇಳಿ, ನನಗೆ ಏನೂ ಗೊತ್ತಿಲ್ಲ ಎಂದರು.
![Demo](https://prajatvkannada.com/wp-content/uploads/2023/08/new-Aston-Band.jpeg)