ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಟ್ವೀಟ್ ವಾರ್ ಮುಂದುವರೆದಿದೆ. ತಾವು ‘ಸತ್ಯರಾಮಯ್ಯ’ನವರೇ ಆಗಿದ್ದರೆ, ಸ್ವತಃ ತಾವುಗಳೇ ನೇಮಿಸಿದ್ದ, ತಮ್ಮದೇ ಸರ್ಕಾರದ ಕಾನೂನು ಸಚಿವರೇ ಮುಖ್ಯಸ್ಥರಾಗಿದ್ದ ಸದನ ಸಮಿತಿ ನೀಡಿದ್ದ ನೈಸ್ ಕರ್ಮಕಥೆಯನ್ನು ದಯಮಾಡಿ ಓದಿ. ನೈಸ್ ಅಕ್ರಮ ತನಿಖೆಗೆ ನಾನೇನು ಮಾಡಿದ್ದೆ ಎಂದು ಸಿಎಂ ಕೇಳಿದ್ದಾರೆ.
ಈ ಬಾಲಿಶ ಪ್ರಶ್ನೆಗೆ ಗೌರವದಿಂದಲೇ ಉತ್ತರಿಸುವೆ. ನಾನು ಸಿಎಂ ಆಗಿದ್ದಾಗ ನನ್ನ ಜತೆಗಿದ್ದ ಅಡ್ವೋಕೇಟ್ ಜನರಲ್, ಅವರ ಕಾನೂನು ತಂಡ ನೈಸ್ ದೌಲತ್ತಿನ ಹುಟ್ಟಡಗಿಸಿತ್ತು. ಅಧಿಕಾರಿಗಳನ್ನು ಬೆದರಿಸಿದ್ದ ಆ ಕಂಪನಿಗೆ ಬೊಂಬೆ ತೋರಿಸಿದ್ದೆವು ಎಂದು ಟ್ವೀಟ್ ಮೂಲಕ ಸಿಎಂ ವಿರುದ್ಧ ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.