ಬೆಂಗಳೂರು ;– ಮುನಿರತ್ನ ಅತ್ಯಾಪ್ತ ಎಂದೇ ಗುರುತಿಸಿದ್ದ ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಸೇರಿ ಹಲವರು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.
ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಆರ್.ಆರ್.ನಗರ ಕ್ಷೇತ್ರದಲ್ಲಿ ಆಪರೇಷನ್ ಹಸ್ತ ನಡೆಸುವ ಮೂಲಕ ಬಿಜೆಪಿ ಶಾಸಕ ಮುನಿರತ್ನಗೆ ಡಿಕೆ ಬ್ರದರ್ಸ್ ಬಿಗ್ ಶಾಕ್ ನೀಡಿದ್ದಾರೆ.
ಶಾಸಕ ಮುನಿರತ್ನ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ವೇಲು ನಾಯ್ಕರ್, ಮೋಹನ್ ಕುಮಾರ್, ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಕಳೆದ ಅವಧಿಯಲ್ಲಿ ಪಾಲಿಕೆ ಸದಸ್ಯರಾಗಿ ಈ ಮೂವರು ಆಯ್ಕೆಯಾಗಿದ್ದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ವೇಲು ನಾಯ್ಕರ್ ಕೆಜಿಎಫ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೇಳಿದ್ದರು. ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅವರು ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಇದೀಗ ಶಾಸಕ ಮುನಿರತ್ನ ಆಪ್ತ ವಲಯದ ಮೂವರು ಮಾಜಿ ಕಾರ್ಪೋರೇಟರ್ಗಳು ಕಾಂಗ್ರೆಸ್ ತೆಕ್ಕೆಗೆ ಸೇರಿದ್ದಾರೆ.
![Demo](https://prajatvkannada.com/wp-content/uploads/2023/08/new-Aston-Band.jpeg)