ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಸೂಪರ್ ಹಿಟ್ ಆಗಿದ್ದು ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡಿದೆ. ಆ ಬೆನ್ನಲ್ಲೇ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ದಿ ಕಾಶ್ಮೀರ್ ಫೈಲ್ಸ್ ಕುರಿತಾಗಿ ಮತ್ತೊಂದು ಡಾಕ್ಯುಮೆಂಟರಿ ಮಾಡಿ, ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ನೆಟ್ಟಿಗರೊಬ್ಬರು ‘ನಿಮಗೆ ತಾಕತ್ತಿದ್ದರೆ ಮಣಿಪುರ ಫೈಲ್ಸ್ ಮಾಡಿ’ ಎಂದು ಸವಾಲು ಹಾಕಿದ್ದಾರೆ.
ನೆಟ್ಟಿಗನ ಸವಾಲಿಗೆ ಉತ್ತರಿಸಿರುವ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ‘ನನ್ನ ಮೇಲೆ ವಿಶ್ವಾಸವಿಟ್ಟಿದ್ದಕ್ಕೆ ಧನ್ಯವಾದಗಳು. ಎಲ್ಲವನ್ನೂ ನಾನೇ ಏಕೆ ಮಾಡಬೇಕು ಎಂದು ಬಯಸುತ್ತೀರಿ? ಚಿತ್ರೋದ್ಯಮದಲ್ಲಿ ಬೇರೆ ಯಾರೂ ಇಲ್ಲವೆ?’ ಎಂದು ಪ್ರಶ್ನೆ ಮಾಡಿದ್ದಾರೆ.
ಆರಂಭದಲ್ಲಿ ಸಾಕಷ್ಟು ವಿವಾದ ಹುಟ್ಟುಹಾಕಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಳಿಕ ಬಾಕ್ಸ್ ಆಫೀಸ್ ನಲ್ಲಿ 250 ಕೋಟಿ ಕಲೆಕ್ಷನ್ ಮಾಡಿತ್ತು. ಈ ಚಿತ್ರದ ನಿರ್ದೇಶಕ ಫ್ಯಾನ್ಸ್ ಮತ್ತೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ ಬಾರಿ ಅವರು ಮತ್ತೊಂದು ‘ದಿ ಕಾಶ್ಮೀರ್ ಫೈಲ್ಸ್’ ಜೊತೆ ಬರೋದಾಗಿ ಅಪ್ಡೇಟ್ ಹಂಚಿಕೊಂಡಿದ್ದಾರೆ. ಇನ್ನೂ ಎಲ್ಲೂ ಹೇಳಿರದ ಸಾಕಷ್ಟು ವಿಚಾರಗಳನ್ನ ಒಟಿಟಿ ಮೂಲಕ ತೋರಿಸಲು ನಿರ್ದೇಶಕರು ಮುಂದಾಗಿದ್ದಾರೆ.