ಬೆಂಗಳೂರು ;- ಬಿಜೆಪಿಯ 14 ಕಾರ್ಯಕ್ರಮಗಳನ್ನು ಕೈಬಿಟ್ಟಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದಲಿತೋದ್ಧಾರಕ ಎನ್ನುವ ಕಾಂಗ್ರೆಸ್ಸಿಗರು ಬಿಜೆಪಿ ಜಾರಿಗೊಳಿಸಿದ 14 ಕಾರ್ಯಕ್ರಮಗಳನ್ನು ಕೈಬಿಟ್ಟಿದ್ದಾರೆ. ನೂತನ ಶಿಕ್ಷಣ ನೀತಿ ರದ್ದು ಮಾಡಿದ್ದಾರೆ. ಪಠ್ಯ ಪರಿಷ್ಕರಿಸಿದ್ದಾರೆ. ರೈತರು ಮತ್ತಿತರರಿಗೆ ಜಾರಿ ಮಾಡಿದ್ದ ವಿದ್ಯಾನಿಧಿ ನಿಲ್ಲಿಸಿದ್ದಾರೆ. ಪ್ರತಿಯೊಂದು ಜಿಲ್ಲೆಗೆ ಗೋಶಾಲೆ ಕಟ್ಟುವ ಯೋಜನೆಯನ್ನು ಕೈಬಿಟ್ಟಿದ್ದಾರೆ. ರೈತಪರ ಎಪಿಎಂಸಿ ಕಾಯ್ದೆ ಬದಲಿಸಿದ್ದಾರೆ ಎಂದು ಟೀಕಿಸಿದರು.
ರೈತರಲ್ಲದವರು ಕೃಷಿ ಭೂಮಿ ಖರೀದಿಗೆ ಅವಕಾಶ ಕೊಟ್ಟಿದ್ದು, ಅದನ್ನು ಕೈಬಿಟ್ಟಿದ್ದಾರೆ. ‘ನಮ್ಮ ಕ್ಲಿನಿಕ್’ ಕೈಬಿಟ್ಟಿದ್ದಾರೆ. ಶಾಲೆಗಳಿಗೆ ಒಂದೇ ರೀತಿಯ ಬಣ್ಣವನ್ನು ಕೈಬಿಟ್ಟಿದ್ದಾರೆ. ಯುವಶಕ್ತಿ, ಸ್ತ್ರೀ ಸಾಮರ್ಥ್ಯ ಯೋಜನೆಗಳನ್ನು ಕೈಬಿಟ್ಟಿದ್ದಾರೆ. ರೈತ ಸಮ್ಮಾನ್ ಯೋಜನೆಯ ರಾಜ್ಯದ ಕೊಡುಗೆ 4 ಸಾವಿರ ರೂಪಾಯಿಯನ್ನು ಕೈಬಿಟ್ಟಿದ್ದಾರೆ. ಕೃಷಿಕ ಮಹಿಳೆಯರಿಗೆ ಮಾಸಿಕ 500 ರೂ. ಕೊಡುವ ಶ್ರಮಶಕ್ತಿಯನ್ನು ಕೈಬಿಟ್ಟಿದ್ದಾರೆ. ಅಗ್ನಿವೀರರಾಗಲು ಎಸ್ಸಿ, ಎಸ್ಟಿ ಯುವಕರಿಗೆ ತರಬೇತಿಯನ್ನು ರದ್ದು ಮಾಡಿದ್ದಾರೆ. ಅಂತರ್ಜಲ ಹೆಚ್ಚಿಸುವ ಜಲನಿಧಿ ಯೋಜನೆ, ಹಾಲು ಉತ್ಪಾದಕರ ಬ್ಯಾಂಕ್ ರದ್ದು, ವಿನಯ ಸಾಮರಸ್ಯ ಸ್ಕೀಂ ಕೈಬಿಟ್ಟಿದ್ದಾರೆ ಎಂದು ಆಕ್ಷೇಪಿಸಿದರು.
![Demo](https://prajatvkannada.com/wp-content/uploads/2023/08/new-Aston-Band.jpeg)