ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಲಾಗಿದೆ.
ಇಂದು(ಜು.25) ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆ ಮುಂದೂಡಿಕೆಗೆ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ಪರಿಷ್ಕೃತ ದಿನಾಂಕ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇತ್ರಾವತಿ, ಕುಮಾರಧಾರಾ, ಕಾಳಿ, ಕಾವೇರಿ, ಲಕ್ಷ್ಮಣ ತೀರ್ಥ ಸೇರಿ ರಾಜ್ಯದಲ್ಲಿ ಹಲವು ನದಿಗಳು ಅಪಾಯಮಟ್ಟದಲ್ಲಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಆಸ್ತವ್ಯಸ್ತಗೊಂಡಿದೆ. ಇದರ ಜೊತೆ ಕರಾವಳಿ ಭಾಗದ 3 ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿದೆ.
ಇದನ್ನೂ ಓದಿ : ಬೆಳಗಾವಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆ : ಗೋಕಾಕ್ ಫಾಲ್ಸ್ ವೀಕ್ಷಣೆಗೆ ನಿಷೇಧ!
![Demo](https://prajatvkannada.com/wp-content/uploads/2023/08/new-Aston-Band.jpeg)