ರಾಯಚೂರು : ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಖಾಸಗಿ ಸೈಬರ್ ಕೇಂದ್ರಗಳಲ್ಲಿ ಅಕ್ರಮವಾಗಿ ಗ್ರಾಹಕರಿಂದ 100, 200 ರೂಪಾಯಿ ಹಣ ಪಡೆಯುತ್ತಿರುವ ಹಿನ್ನಲೆ ಮೂರು ಸೈಬರ್ ಕೇಂದ್ರಗಳ ವಿರುದ್ಧ ಪೊಲೀಸರು FIR ದಾಖಲಿಸಿದ್ದು, ಜಿಲ್ಲೆಯ ಮಾನ್ವಿಯ 3 ಸೈಬರ್ ಕೇಂದ್ರಗಳ ವಿರುದ್ಧ ಮಾನ್ವಿ ತಹಶೀಲ್ದಾರ್ ಚಂದ್ರಕಾಂತ್ ದೂರು ಆಧರಿಸಿ ಪ್ರಕರಣ ದಾಖಲು ಮಾಡಲಾಗಿದೆ.
ಇತ್ತ ಇನ್ನೊಂದು ಕಡೆ ಆಡಳಿತ ಪಕ್ಷ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಅರ್ಜಿ ನೊಂದಣಿ ಹಿನ್ನೆಲೆ ಗದಗ ಜಿಲ್ಲೆ ನರಗುಂದ ಪಟ್ಟಣದ ಪುರಸಭೆಯಲ್ಲಿ ಸಾವಿರಾರು ಮಹಿಳೆಯರ ಕ್ಯೂ ನಿಂತಿರುವ ದೃಶ್ಯ ಸೆರೆಯಾಗಿದೆ.
ಅರ್ಜಿ ಸ್ವಿಕೃತಿ ಹಿನ್ನೆಲೆ ಮಹಿಳೆಯರು ಕಿಕ್ಕಿರಿದು ತುಂಬಿದ್ದು, ಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿದೆ. ಇನ್ನೂ ಪುರಸಭೆ ಕಚೇರಿಗೆ ಅರ್ಜಿ ಸಲ್ಲಿಸಲು ಮಹಿಳೆಯರು ಪರದಾಟ ನಡೆಸಿದ್ದು, ಮಹಿಳಾ ಮಣಿಗಳನ್ನ ನಿಯಂತ್ರಿಸಲು ಹೋಂ ಗಾರ್ಡ್ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.
ಇದನ್ನೂ ಓದಿ : ಭಾರತ – ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ..!