ದಾವಣಗೆರೆ : ನಿರಂತರ ಮಳೆ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಗೋಡೆ ಕುಸಿದು ಎಳೆ ಕಂದಮ್ಮ ದಾರುಣ ಸಾವಿಗೀಡಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಮನೆಯೊಂದರ ಗೋಡೆ ಕುಸಿದ ಪರಿಣಾಮ 1 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹರಿಹರ ತಾಲೂಕಿನ ಕುಂಬಳೂರಿನಲ್ಲಿ ನಡೆದಿದೆ. ಕುಂಬಳೂರಿನ ಲಕ್ಷ್ಮಿ ಹಾಗೂ ಕೆಂಚಪ್ಪ ದಂಪತಿಯ ಪುತ್ರಿ ಸ್ಪೂರ್ತಿ ಮನೆಯ ಗೋಡೆ ಕುಸಿದು ಅದರಡಿ ಸಿಲುಕಿ ದಾರುಣ ಅಂತ್ಯ ಕಂಡ ಕಂದಮ್ಮ. ಕಳೆದ 4-5 ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದಿದೆ. ತಂದೆ-ತಾಯಿ ಜೊತೆ ಮಲಗಿದ್ದ ಬಾಲಕಿ ಮೇಲೆ ಗೋಡೆ ಬಿದ್ದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದಾಳೆ.
ಘಟನೆಯಲ್ಲಿ ಬಾಲಕಿಯ ತಂದೆ-ತಾಯಿಗೂ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಟ್ಟ ಕಂದಮ್ಮನ ಅಗಲಿಕೆಯಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ಬೀದರ್ನ ಮಳೆ ಹಾನಿ ಪ್ರದೇಶಗಳಿಗೆ.. ರಾಜ್ಯ ಸರ್ಕಾರದಿಂದ 50 ಸಾವಿರ ಪರಿಹಾರ : ಈಶ್ವರ ಖಂಡ್ರೆ ಭರವಸೆ
![Demo](https://prajatvkannada.com/wp-content/uploads/2023/08/new-Aston-Band.jpeg)