ಬಾಗಲಕೋಟೆ: ಸಿಂಗಾಪುರದಲ್ಲಿ ಆಪರೇಷನ್ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರ ‘ಬಿಜೆಪಿಯವರು ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರುವವರಲ್ಲ, ಅಡ್ಡದಾರಿ ಹಿಡಿದು ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆಂದು ಬಾಗಲಕೋಟೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಜನರು ತಿರಸ್ಕರಿಸಿದರೂ ಅವರ ಪ್ರಯತ್ನ ನಡೆದಿರಬೇಕು ಎಂದಿದ್ದಾರೆ. ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಭಿನ್ನಾಭಿಪ್ರಾಯ ಇದೆ ಎನ್ನುವುದು ಸತ್ಯ. ಡಿ. ಕೆ. ಶಿವಕುಮಾರ್ ಸರ್ಕಾರದ ಅಸ್ಥಿರತೆಯ ಬಗ್ಗೆ ಎರಡು ಬಾರಿ ಬಹಿರಂಗವಾಗಿ ಹೇಳಿಕೆ ನೀಡಿದರೂ ಸಿಎಂಗೆ ಮಾಹಿತಿ ಇಲ್ಲ ಎಂದರೆ ಇಬ್ಬರ ನಡುವೆ ಹೊಂದಾಣಿಕೆ ಇಲ್ಲ ಅಂತ ಅರ್ಥ ಎಂದು ಅಭಿಪ್ರಾಯ ಪಟ್ಟರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಜೈನ ಮುನಿ ಹತ್ಯೆಯಿಂದ ಹಿಡಿದು ನಿತ್ಯ ಕೊಲೆ ನಡೆಯುತ್ತಿವೆ. ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದೆ. ನ್ಯಾಯಾಧೀಶರಿಗೆ ಅಂತಾರಾಷ್ಟ್ರೀಯ ಮಟ್ಟದ ಕೊಲೆ ಬೆದರಿಕೆ ಬರುತ್ತಿದೆ. ನ್ಯಾಯಾಧೀಶರಿಗೆ ರಕ್ಷಣೆ ಇಲ್ಲದಿದ್ದರೆ ಬೇರೆಯವರಿಗೆ ಹೇಗೆ ರಕ್ಷಣೆ ನೀಡುತ್ತಾರೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ : ನಿರಂತರ ಮಳೆ ಹಿನ್ನೆಲೆ : ಮನೆ ಗೋಡೆ ಕುಸಿದು ಎಳೆ ಕಂದಮ್ಮ ಸಾವು!