ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೈಕಮಾಂಡ್ ಭೇಟಿಗಾಗಿ ನವದೆಹಲಿಗೆ ತೆರಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿಗೆ ಸಮಯ ಕೇಳಿದ್ದಾರೆ. ರಾಜ್ಯ ರಾಜಕೀಯದ ವಿಚಾರ ಚರ್ಚೆ ನಡೆಸಲು ವರಿಷ್ಠರ ಭೇಟಿ ಮಾಡಲಿದ್ದಾರೆ.
ಬಿಜೆಪಿ ಪಕ್ಷದಲ್ಲಿ ಇನ್ನೂ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟಾಗಿದ್ದುಹಾಗೆ ರಾಜ್ಯಾಧ್ಯಕ್ಷ ಸ್ಥಾನ ಮಾನ ಬಗ್ಗೆ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚಿಸಲು ದೆಹಲಿಯತ್ತ ಪಯಾಣ ಬೆಳಸಿದ್ದಾರೆ. ಆದರೂ ಮುಂದಿನ ದಿನಗಳಲ್ಲಿ ಏನಾಗುತ್ತೆ ಅಂತಾ ಕಾದುನೋಡಬೇಕಿದೆ.