ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಒಳಗೆ ಡ್ರಗ್ ಪೆಡ್ಲಿಂಗ್ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಈ ಹಿನ್ನಲೆ ಓರ್ವ ಖಾಸಗಿ ಕಾಲೇಜು ವಿದ್ಯಾರ್ಥಿಯನ್ನ ಬಸವನಗುಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ .
ಮೈಸೂರು ರಸ್ತೆಯ ಕೆಲ ಕಾಲೇಜುಗಳಲ್ಲಿ ಡ್ರಗ್ ಮಾರಾಟ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ಹಿನ್ನಲೆ ದಾಳಿ ಮಾಡಿದ್ದರು. ಈ ವೇಳೆ ಕಾಲೇಜು ವಿದ್ಯಾರ್ಥಿಯಿಂದಲೇ ಇತರ ವಿದ್ಯಾರ್ಥಿಗಳಿಗೆ ಡ್ರಗ್ ಮಾರಾಟವಾಗುತ್ತಿರುವುದು ತಿಳಿದು ಬಂದಿದೆ. ಅದರಂತೆ ಕೇರಳ ಮೂಲದ ಪೆಡ್ಲರ್ ಆಗಿರುವ ಖಾಸಗಿ ಕಾಲೇಜಿನ ವಿದ್ಯಾರ್ಥಿ ಬಿಸ್ಟೀನ್ ರಾಯ್ ಎಂಬಾತ ಬಸವನಗುಡಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಇನ್ನು ಆರೋಪಿ ಬಂಧನದ ವೇಳೆ 20 ಲಕ್ಷ ರೂ ಮೌಲ್ಯದ ಡ್ರಗ್ ಪತ್ತೆಯಾಗಿದೆ.
ಇವರು ಹೊರಗಿನಿಂದ ಡ್ರಗ್ ತರಿಸಿಕೊಂಡು, ತಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಸದ್ಯ ಓರ್ವನನ್ನ ಬಂಧಿಸಿದ ಬಸವನಗುಡಿ ಪೊಲೀಸರು. ಆತನ ಬಂಧನದ ಬಳಿಕ ಉಳಿದ ಏಳು ಮಂದಿ ನಾಪತ್ತೆಯಾಗಿದ್ದು, ಇದೀಗ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.