ಬೆಂಗಳೂರು: ಇತ್ತೀಚಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಫ್ಯಾಮಿಲಿ ಕೂಡ ವಿದೇಶ ಪ್ರವಾಸ ಕೈಗೊಂಡಿದೆ. ಹಾಗೆ ಇಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕುಟುಂಬ ಕೂಡ ವಿದೇಶ ಟ್ರಿಪ್ ಹೊರಟ್ಟಿದ್ದಾರೆ.
ಕೆಂಪೇಗೌಡ ಏರ್ಪೋರ್ಟ್ನಿಂದ ತೆರಳಿರುವ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ ವಿಜಯೇಂದ್ರ ಒಂದು ವಾರಗಳ ಕಾಲ ದುಬೈನಲ್ಲಿ ಇರಲಿದ್ದಾರೆ ಎಂದು ಹೇಳಲಾಗ್ತಿದೆ.
ಇಂದು ಮುಂಜಾನೆ 3.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬಿಎಸ್ವೈ ದುಬೈಗೆ ಪ್ರಯಾಣ ಬೆಳೆಸಿದ್ದಾರೆ. ಬಿ.ಎಸ್ ಯಡಿಯೂರಪ್ಪ ಅವರಿಗೆ ಶಾಸಕ ಬಿ.ವೈ ವಿಜಯೇಂದ್ರ ಹಾಗೂ ಬಿಎಸ್ವೈ ಆಪ್ತ ರುದ್ರೇಶ್ ಸಹ ಸಾಥ್ ನೀಡಿದ್ದಾರೆ.
![Demo](https://prajatvkannada.com/wp-content/uploads/2023/08/new-Aston-Band.jpeg)