ಧಾರವಾಡ: ಉಡುಪಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣ ಖಂಡಿಸಿ, ಧಾರವಾಡದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಪ್ರತಿಭಟನೆ ನಡೆಸಿ ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದರು. ಹುಬ್ಬಳ್ಳಿ ಧಾರವಾಡ ಮಾಹಾನಗರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ನಗರದ ಜಿಲ್ಕಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದ ಮಹಿಳಾ ಬಿಜೆಪಿ ಸದಸ್ಯರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರು ಮಾಡಿರುವ ಪ್ರಕರಣವನ್ನು ಗೃಹ ಸಚಿವರು ಇದೊಂದು ಸಣ್ಣ ವಿಷಯ ಎಂದು ಉಡಾಫೆ ಹೇಳಿಕೆ ನೀಡುತ್ತಾರೆ. ಸರ್ಕಾರ ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆ. ಅಲ್ಪಸಂಖ್ಯಾತರ ಓಲೈಕೆ ಮಾಡುವ ದೃಷ್ಠಿಯಿಂದ ಪ್ರಕರಣ ದಿಕ್ಕನ್ನೇ ತಪ್ಪಿಸುತ್ತಿದೆ. ಕೂಡಲೇ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಒಂದು ವೇಳೆ ಸರ್ಕಾರ ಈ ಪ್ರಕರಣದ ಕುರಿತು ನಿರ್ಲಕ್ಷ್ಯ ಮುಂದುವರೆಸಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಇದೇವೇಳೆ ಸರ್ಕಾರಕ್ಕೆ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಎಚ್ಚರಿಕೆ ನೀಡಿದರು.