ಬೆಂಗಳೂರು ;- ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ.ಎಸ್ ಎಂಬವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ.
ಹೈಗ್ರೌಂಡ್ಸ್ ಠಾಣಾ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ಉಡುಪಿ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣದ ಕುರಿತು ರಾಜ್ಯ ಕಾಂಗ್ರೆಸ್ ಮಾಡಿದ್ದ ಟ್ವೀಟ್ ವಿರೋಧಿಸುವ ಭರದಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರು ಸಿದ್ದರಾಮಯ್ಯ ಅವರ ಕುಟುಂಬ ಸದಸ್ಯರನ್ನು ಉಲ್ಲೇಖಿಸಿ ಮರು ಟ್ವೀಟ್ ಮಾಡಿದ್ದರು.
ಮುಖ್ಯಮಂತ್ರಿಗಳು ಮತ್ತು ಅವರ ಕುಟುಂಬ ಸದಸ್ಯರ ಕುರಿತು ಅವಾಚ್ಯ ಶಬ್ದ ಬಳಸಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತ ಹನುಮಂತರಾಯ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಶಕುಂತಲಾರನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
![Demo](https://prajatvkannada.com/wp-content/uploads/2023/08/new-Aston-Band.jpeg)