ತುಮಕೂರು ;- ಕಾಂಗ್ರೆಸ್ ಸರ್ಕಾರ ಅಸ್ಥಿರ ಮಾಡೋಕೆ ಯಾರಿಂದಲೂ ಆಗಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸುವ ಮೂಲಕ ಸರ್ಕಾರ ರಚಿಸಿರುವ ಕಾಂಗ್ರೆಸ್ ಗೆ, ವಿಪಕ್ಷಗಳ ಭಯ ಶುರುವಾದಂತೆ ಕಾಣುತ್ತಿದೆ. ಈಗಾಗಲೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿದೇಶ ಪ್ರವಾಸವನ್ನ ಕೈಗೊಂಡಿದ್ದು, ಈ ಸರ್ಕಾರ ಅಸ್ಥಿರ ಮಾಡೋಕೆ ಯಾರಿಂದಲೂ ಆಗಲ್ಲ ಎಂದರು.
ಯಾರು ಹೇಗೆ ಎಲ್ಲಿ ವಿದೇಶಕ್ಕೆ ಹೋಗುತ್ತಾರೆ ಅನ್ನೋದು ನಮಗೆ ಗೊತ್ತಿಲ್ಲ. ಸರ್ಕಾರ ಅಸ್ಥಿರ ಮಾಡೋಕೆ ಯಾರಿಂದಲೂ ಆಗಲ್ಲ, ನಾವು ಸುಭ್ರದ್ರವಾಗಿದ್ದೇವೆ ಎಂದು ತಿಳಿಸಿದರು.
ಉಡುಪಿ ಯುವತಿ ವಿಡಿಯೋ ಪ್ರಕರಣದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಹೇಳಿಕೆಯನ್ನೇ ಬಿಜೆಪಿಯವರು ಪ್ರಚಾರಕ್ಕೆ ಬಳಸಿದರೆ ಬಳಸಿಕೊಳ್ಳಲಿ. ನಮಗೆ ಜವಾಬ್ದಾರಿ ಇದೆ. ಸರ್ಕಾರ ನಡೆಸುವ ನಾವು ಇಂತಹ ಘಟನೆ ಲಘುವಾಗಿ ಸ್ವೀಕರಿಸುವುದಿಲ್ಲ. ಆದರೆ, ಇವರು ಬೇರೆ ಬೇರೆ ಅರ್ಥ ಕಲ್ಪಿಸೋದು ಸರಿಯಲ್ಲ. ಅವರು ಹೇಳಿದ್ದಕ್ಕೆ, ವ್ಯಾಖ್ಯಾನಕ್ಕೆ ಉತ್ತರ ಕೊಡಲು ಆಗಲ್ಲ ಎಂದು ಹೇಳಿದರು.