ಮುಂಬೈ: ಸಾಲ (Loan) ತೆಗೆದುಕೊಂಡು ಅದನ್ನು ಮರುಪಾವತಿ ಮಾಡಲು ಸಾಧ್ಯವಾಗದೇ ಹೋಗಿದ್ದಕ್ಕೆ ಪತಿಯೆದುರೇ ಮಹಿಳೆಯ ಮೇಲೆ ಅತ್ಯಾಚಾರ (Rape) ಎಸಗಿರುವ ಘಟನೆ ಮಹಾರಾಷ್ಟ್ರದ (Maharashtra) ಪುಣೆಯಲ್ಲಿ (Pune) ನಡೆದಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ.
ಘಟನೆ ಈ ವರ್ಷ ಫೆಬ್ರವರಿಯಲ್ಲಿ ನಡೆದಿದೆ. ಆದರೆ ಈಗ ಬೆಳಕಿಗೆ ಬಂದಿದೆ. ಅತ್ಯಾಚಾರ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಪೊಲೀಸರ ಪ್ರಕಾರ ವ್ಯಕ್ತಿಯೊಬ್ಬ 40,000 ರೂ. ಸಾಲ ಪಡೆದಿದ್ದು, ಅದನ್ನು ಮರುಪಾವತಿ ಮಾಡಲು ಸಾಧ್ಯವಾಗದೇ ಹೋಗಿದ್ದಕ್ಕೆ ಸಾಲ ನೀಡಿದಾತ ಆತನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಆರೋಪಿ ಮಹಿಳೆಯ ಪತಿಗೆ ಚಾಕು ತೋರಿಸಿ, ಬೆದರಿಸಿ ನಂತರ ಆತನ ಸಮ್ಮುಖದಲ್ಲೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಕೃತ್ಯದ ವೀಡಿಯೋವನ್ನು ತನ್ನ ಮೊಬೈಲ್ ಫೋನ್ನಲ್ಲಿ ರೆಕಾರ್ಡ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.