ಭೋಪಾಲ್ ;– 11 ವರ್ಷದ ಪುಟ್ಟ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಸತ್ನಾ ಜಿಲ್ಲೆಯ ಮೈಹಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಒಬ್ಬ ಇಲ್ಲಿನ ದೇವಾಸ್ಥಾನದ ಕಸಾಯಿ ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅತ್ಯಾಚಾರಕ್ಕೆ ಒಳಗಾದ ಬಾಲಕಿ ಮೈಮೇಲೆ ಪರಚಿದ ಗಾಯಗಳಾಗಿವೆ. ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಾಲಕಿ ಶುಕ್ರವಾರ ಸಂಜೆಯಿಂದ ಕಾಣೆಯಾಗಿದ್ದರು. ಪೋಷಕರು ರಾತ್ರಿಯೇ ದೂರು ಕೊಟ್ಟಿದ್ದರು. ಶನಿವಾರ ಬೆಳಗ್ಗೆ ಆರ್ಕಾಂಡಿಯ ನಿರ್ಜನ ಪ್ರದೇಶದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಾಲಕಿ ಪತ್ತೆಯಾಗಿದ್ದಳು.
ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿ.ಎಂ ಶಿವರಾಜ್ ಸಿಂಗ್ ಚೌಹಾಣ್ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಸಂತ್ರಸ್ತ ಬಾಲಕಿಗೆ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಅವರು ಹೇಳಿದ್ದಾರೆ.