ಬೆಂಗಳೂರು: ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದವರ ಮನೆ ಮೇಲೆ ಪೊಲೀಸರು ರೇಡ್ ಮಾಡಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಕಲ್ಲುಗುಡ್ಡದಹಳ್ಳಿ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದು ಸ್ಫೋಟಕಕ್ಕೆ ಬಳಸುತ್ತಿದ್ದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಕಲ್ಲುಗುಡ್ಡದಹಳ್ಳಿಯ ಶಂಕರ್(30), ಕುಮಾರ್(21), ದಾಸೇನಹಳ್ಳಿಯ ಶ್ರೀನಿವಾಸ್(40)ನನ್ನು ಬಂಧಿಸಿದ್ದಾರೆ.
ಸಲ್ಫರ್ ಪೌಡರ್, ಪೋಟ್ಯಾಶಿಯಂ ನೈಟ್ರೇಟ್ ಸೇರಿ ಹಲವು ವಸ್ತು ಜಪ್ತಿ ಮಾಡಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.