ಬೆಂಗಳೂರು ;- ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುವವರು ಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.
ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್ಐ ಆರ್ ದಾಖಲಾಗಿದೆ.
ಪ್ರಕರಣದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದರು.
ಇನ್ನೂ ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿಯ ವಿಡಿಯೋ ಚಿತ್ರೀಕರಣ ಪ್ರಕರಣ ರಾಜ್ಯಾದ್ಯಂತ ಸಾಕಷ್ಟು ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸುತ್ತಿದೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಈಗಾಗಲೇ ಪ್ರಕರಣ ದಾಖಲು ಮಾಡಲಾಗಿದೆ. ಈ ನಡುವೆ ಕೇಂದ್ರ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಉಡುಪಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.