ಬೆಂಗಳೂರು ;- ಪಕ್ಷ ನನಗೆ ಮುಂದೆ ನೀಡುವ ಯಾವುದೇ ಜವಾಬ್ದಾರಿಯನ್ನು ನಿಷ್ಟೆಯಿಂದ ಮಾಡುತ್ತೇನೆ ಎಂದು ಮಾಜಿ ಶಾಸಕ ಸಿಟಿ ರವಿ ಹೇಳಿದ್ದಾರೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆಗೊಳಿಸಿರುವ ಸಂಬಂಧ ಟ್ವೀಟ್ ಮಾಡಿರುವ ಅವರು, ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲು ಜವಾಬ್ದಾರಿ ನೀಡಿ ಅವಕಾಶ ಮಾಡಿಕೊಟ್ಟ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಈ ಜವಾಬ್ದಾರಿ ನನಗೆ ಬಹಳಷ್ಟು ಅನುಭವ ಮತ್ತು ಬದುಕಿಗೆ ಹೊಸ ಆಯಾಮಗಳನ್ನು ನೀಡಿದೆ. ಬೂತ್ ಮಟ್ಟದ ಕಾರ್ಯಕರ್ತನಿಂದ ಹಿಡಿದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದ ವರೆಗಿನ ನನ್ನ ಪಯಣದಲ್ಲಿ ನಿರಂತರವಾಗಿ ಕಾರ್ಯಕರ್ತನ ಭಾವದಲ್ಲಿ ಕೆಲಸ ಮಾಡಿದ್ದೇನೆ. ಇನ್ನು ಮುಂದೆಯೂ ಅದೇ ಭಾವದಿಂದ ಕೆಲಸ, ಪಕ್ಷ ನೀಡಿದ ಜವಾಬ್ದಾರಿಯನ್ನು ಕಾಯಾ ವಾಚಾ ಮನಸಾ ನಡೆಸುತ್ತೇನೆ. ಭಾರತ್ ಮಾತಾ ಕಿ ಜೈ ಎಂದು ಟ್ವೀಟ್ ಮಾಡಿದ್ದಾರೆ.
![Demo](https://prajatvkannada.com/wp-content/uploads/2023/08/new-Aston-Band.jpeg)