ಚಿಕ್ಕಬಳ್ಳಾಪುರ: ಸದಾ ಒಂದಲ್ಲ ಒಂದು ವಿಚಾರವಾಗಿ ಸದ್ದು ಮಾಡುವ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಈಗ ಮತ್ತೊಂದು ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಖಾಕಿ ಶರ್ಟ್ ಧರಿಸಿ ಆಟೋ ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ.
ಚಿಕ್ಕಬಳ್ಳಾಪುರದ (Chikkaballapura) ಸರ್ ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಆಟೋ ಚಾಲಕರಿಗೆ 5,000 ರೂ. ಸಹಾಯ ಧನ ನೀಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಟೋ ಚಲಾಯಿಸಿಕೊಂಡು ಬಂದು ಶಾಸಕರು ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಟೋ ಚಾಲಕರ ಕಷ್ಟ ನನಗೆ ಗೊತ್ತಿದೆ. ನಾನು ಕೂಡ ಕಷ್ಟ ಪಟ್ಟಿದ್ದೀನಿ. ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಮೂಟೆ ಹೊತ್ತಿದ್ದೀನಿ. 50 ರೂ. ಸಿಗುತ್ತೆ ಅಂತ ಹಿಂದೆ ಆಟೋ ಓಡಿಸಿದ್ದೀನಿ ಎಂದು ನೆನಪಿಸಿಕೊಂಡರು.