ಬೆಂಗಳೂರು ;- ರಾಜ್ಯದ 11 ಸಾವಿರ ಕಡೆ ಆ.27ರಂದು ಗೃಹ ಲಕ್ಷ್ಮೀ ಯೋಜನೆಗೆ ಏಕಕಾಲಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ 11 ಸಾವಿರ ಕಡೆಗಳಲ್ಲಿ ಏಕಕಾಲಕ್ಕೆ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು. ಎಲ್ಲಾ ಗ್ರಾಮ ಪಂಚಾಯತ್, ನಗರಸಭೆ, ಪುರಸಭೆಗಳಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಈ ಸಂಬಂಧ ಪಂಚಾಯತಿಗೊಬ್ಬರಂತೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿದ್ದೇವೆ ಎಂದು ಡಿಸಿಎಂ ಹೇಳಿದರು.
ಪಕ್ಷಾತೀತವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ. ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಎಲ್ಲರಿಗೂ ಅನುಕೂಲ ಆಗಲೆಂದು ಭಾನುವಾರ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದೇವೆ. ಸುಮಾರು 1.5 ಕೋಟಿ ಗೃಹಿಣಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈ ಯೋಜನೆಗೆ ಯಾವಾಗ ಬೇಕಾದರೂ ನೋಂದಣಿ ಮಾಡಿಕೊಳ್ಳಬಹುದು ಎಂದು ಇದೇ ವೇಳೆ ತಿಳಿಸಿದರು.