ಭೋಪಾಲ್: ಮಧ್ಯಪ್ರದೇಶದ ಬಿಜೆಪಿ (Madhya Pradesh BJP) ವಿರುದ್ಧ 50% ಕಮಿಷನ್ (Commission) ಆರೋಪ ಮಾಡಿರುವ ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra), ಸಂಸದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹಾಗೂ ಮಾಜಿ ಕೇಂದ್ರ ಸಚಿವ ಅರುಣ್ ಯಾದವ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ‘ಎಕ್ಸ್’ (ಟ್ವಿಟ್ಟರ್) ಖಾತೆಗಳ ಹ್ಯಾಂಡ್ಲರ್ಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಇಂದೋರ್ ಪೊಲೀಸರು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಆಗಿರುವ ಎಕ್ಸ್ನಲ್ಲಿ ಜ್ಞಾನೇಂದ್ರ ಅವಸ್ತಿ ಎಂಬ ವ್ಯಕ್ತಿಯ ಹೆಸರನ್ನು ಹೊಂದಿರುವ ನಕಲಿ ಪತ್ರವನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ಕಾನೂನು ಸೆಲ್ ಸಂಚಾಲಕ ನಿಮೇಶ್ ಪಾಠಕ್ ದೂರು ನೀಡಿರುವುದಾಗಿ ಇಂದೋರ್ ಪೊಲೀಸ್ ಕಮಿಷನರ್ ಶನಿವಾರ ತಡರಾತ್ರಿ ಹೇಳಿದ್ದಾರೆ. ಪತ್ರದಲ್ಲಿ 50% ಕಮಿಷನ್ ನೀಡುವಂತೆ ರಾಜ್ಯದ ಗುತ್ತಿಗೆದಾರರಿಗೆ ಕೇಳಲಾಗುತ್ತಿದೆ ಎಂದು ಉಲ್ಲೇಖಿಸಲಾಗಿದೆ.