ನವದೆಹಲಿ: ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ನವದೆಹಲಿಯ ಕೆಂಪು ಕೋಟೆಯಲ್ಲಿ ಇಂದು (ಮಂಗಳವಾರ) ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.
77ನೇ ಸ್ವಾತಂತ್ರ್ಯ ದಿನದಂದು ರಾಜ್ಘಾಟ್ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಕೆಂಪು ಕೋಟೆ ಕಡೆ ಆಗಮಿಸಿದರು. ಬಳಿಕ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಐಎಎಫ್ ಹೆಲಿಕಾಪ್ಟರ್ ತ್ರಿವರ್ಣ ಧ್ವಜಕ್ಕೆ ಪುಷ್ಪವೃಷ್ಟಿ ಮಾಡಿತು.