ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ನಡೆದ ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಎಡವಿದ ಟೀಂ ಇಂಡಿಯಾ ಆಟಗಾರ ಸಂಜು ಸ್ಯಾಮ್ಸನ್ (Sanju Samson) ಅವರನ್ನ ಏಕದಿನ ಏಷ್ಯಾಕಪ್ ಟೂರ್ನಿಗೆ (Asia Cup 2023) ತಂಡದಿಂದ ಕೈಬಿಡಲು ಮುಂದಾಗಿದೆ
ಇದೇ ಆಗಸ್ಟ್ 30 ರಿಂದ ಸೆಪ್ಟೆಂಬರ್ 17ರ ವರೆಗೆ ಏಕದಿನ ಏಷ್ಯಾಕಪ್ ಟೂರ್ನಿ ನಡೆಯಲಿದ್ದು, ಈ ಸಲುವಾಗಿ ಬಿಸಿಸಿಐ (BCCI) ಟೀಂ ಇಂಡಿಯಾಕ್ಕೆ ಆಯ್ಕೆ ಕಸರತ್ತು ನಡೆಸಿದೆ. ಈ ಬಾರಿ ಏಷ್ಯಾಕಪ್ ಟೂರ್ನಿಯ ಹಕ್ಕು ಪಾಕಿಸ್ತಾನದ (Pakistan) ಬಳಿಯೇ ಇದ್ದರೂ ಬಿಸಿಸಿಐ ಪಾಕಿಸ್ತಾನಕ್ಕೆ ಭಾರತ ತಂಡವನ್ನ ಕಳುಹಿಸಲು ನಿರಾಕರಿಸಿದ ನಂತರ ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಏಷ್ಯನ್ ಕ್ರಿಕೆಟ್ ಸಮಿತಿ ನಿರ್ಧರಿಸಿದೆ. ಆದ್ದರಿಂದ ಪಾಕಿಸ್ತಾನ ಮತ್ತು ಶ್ರೀಲಂಕಾ (SriLanka) ಎರಡೂ ದೇಶಗಳಲ್ಲಿ ಪಂದ್ಯ ನಡೆಯುತ್ತಿದೆ.
ಸೆಪ್ಟೆಂಬರ್ 2ರಂದು ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಎದುರು ಪೈಪೋಟಿ ನಡೆಸುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಟೂರ್ನಿಯು ಸೆಪ್ಟೆಂಬರ್ 17ರಂದು ಕೊಲಂಬೊದಲ್ಲಿ ಅಂತ್ಯಗೊಳ್ಳಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಪಾಕಿಸ್ತಾನ ಮತ್ತು ಭಾರತ ತಂಡಗಳು ಮೂರು ಬಾರಿ ಏಷ್ಯಾಕಪ್ ಟೂರ್ನಿಯಲ್ಲಿ ಮುಖಾಮುಖಿಯಾಗಲಿವೆ.