ತಂಡದಲ್ಲಿ ಬ್ಯಾಟಿಂಗ್ ಡೆಪ್ತ್ ಹೆಚ್ಚಿಸುವ ಸಲುವಾಗಿ 2023ರ ಏಷ್ಯಾ ಕಪ್ ಭಾರತ ತಂಡದಲ್ಲಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರನ್ನು ಆಯ್ಕೆ ಮಾಡಲು ಆಯ್ಕೆದಾರರಿಗೆ ಸಾಧ್ಯವಾಗಲಿಲ್ಲ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಏಷ್ಯಾ ಕಪ್ ಭಾರತ ತಂಡದಲ್ಲಿ ಪೂರ್ಣ ಪ್ರಮಾಣದ ಸ್ಪಿನ್ನರ್ ಆಗಿ ಕೇವಲ ಚೈನಾಮನ್ ಖ್ಯಾತಿಯ ಕುಲ್ದೀಪ್ ಯಾದವ್ ಅವರನ್ನು ಮಾತ್ರ ಆಯ್ಕೆ ಮಾಡಲಿದ್ದು, ಸ್ಪಿನ್ ಆಲ್ರೌಂಡರ್ಗಳಾಗಿ ರವಿಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಅವರನ್ನು ಉಳಿಸಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಯುಜ್ವೇಂದ್ರ ಚಹಲ್ ಅವರನ್ನು ಕೈ ಬಿಡಲಾಗಿದೆ. 2019ರ ಏಕದಿನ ವಿಶ್ವಕಪ್ ಬಳಿಕ ಚಹಲ್ 23 ಪಂದ್ಯಗಳಿಂದ ಮೂರು ಬಾರಿ 4 ವಿಕೆಟ್ ಸಾಧನೆ ಸೇರಿದಂತೆ 37 ವಿಕೆಟ್ಗಳನ್ನು ಕಬಳಿಸಿದ್ದಾರೆ.
ಈ ಕ್ರಮಾಂಕಗಳಲ್ಲಿ ಬ್ಯಾಟ್ ಮಾಡಬಲ್ಲ ಆಟಗಾರ ನಮಗೆ ಅಗತ್ಯವಿತ್ತು. ಅಕ್ಷರ್ ಪಟೇಲ್ ಈ ವರ್ಷ ವೈಟ್ ಬಾಲ್ ಕ್ರಿಕೆಟ್ನಲ್ಲಿ ಉತ್ತಮ ರನ್ ಗಳಿಸಿದ್ದಾರೆ. ಆದರೆ, ರೆಡ್ ಬಾಲ್ ಕ್ರಿಕೆಟ್ನಲ್ಲಿ ಹೆಚ್ಚಿನ ಅವಕಾಶ ಪಡೆಯದ ಹೊರತಾಗಿಯೂ ಅವರು ವೈಟ್ಬಾಲ್ ಕ್ರಿಕೆಟ್, ವಿಶೇಷವಾಗಿ ಐಪಿಎಲ್ನಲ್ಲಿ ಚೆನ್ನಾಗಿ ಬ್ಯಾಟ್ ಮಾಡಿದ್ದಾರೆ. ವಿಂಡೀಸ್ ಸರಣಿಯಲ್ಲಿ ಇವರಿಗೆ ಹೆಚ್ಚಿನ ಅವಕಾಶ ಸಿಕ್ಕಿರಲಿಲ್ಲ. ಇವರು ಎಡಗೈ ಬ್ಯಾಟ್ಸ್ಮನ್ ಆಗಿರುವ ಕಾರಣ ಬ್ಯಾಕೆಂಡ್ನಲ್ಲಿ ಸ್ಪಿನ್ನರ್ಗಳನ್ನು ಎದುರಿಸಲು ಸಾಧ್ಯವಾಗುತ್ತದೆ,” ಎಂದು ರೋಹಿತ್ ಶರ್ಮಾ ತಿಳಿಸಿದ್ದಾರೆ.