ಏಷ್ಯಾ ಕಪ್ 2023ರ ಹೊಸ್ತಿಲಲ್ಲಿ ಟೀಂ ಇಂಡಿಯಾ ತರಬೇತಿ ಜೋರಾಗಿದೆ. ಬೆಂಗಳೂರಿನ ಆಲೂರಿನ ಅಭ್ಯಾಸ ಶಿಬಿರದಲ್ಲಿ ಆಟಗಾರರನ್ನು ಜೋಡಿಯಾಗಿ ವಿಂಗಡಿಸಿ ತರಬೇತಿ ನೀಡಲಾಗುತ್ತಿದೆ.
ತರಬೇತಿಯ ಭಾಗವಾಗಿ ಬ್ಯಾಟರ್ಗಳನ್ನು ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್, ವಿರಾಟ್ ಕೊಹ್ಲಿ (Virat Kohli) ಮತ್ತು ಶ್ರೇಯಸ್ ಅಯ್ಯರ್ ಜೋಡಿಯಾಗಿ ವಿಂಗಡಿಸಲಾಗಿದೆ. ಈ ಆಟಗಾರರು ಬ್ಯಾಟಿಂಗ್ನಲ್ಲಿ ತೊಡಗಿರುವ ವೀಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೈರಲ್ ವೀಡಿಯೋದಲ್ಲಿ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಬ್ಯಾಟಿಂಗ್ ಮಾಡುತ್ತಿದ್ದು, ಇಬ್ಬರೂ ಆಟಗಾರರು ಸ್ಪಿನ್ ಬೌಲರ್ಗಳನ್ನು ಎದುರಿಸಿದ್ದಾರೆ.
ಇದಕ್ಕೂ ಮೊದಲು ಪಂದ್ಯದ ತರಬೇತಿಯ ಕ್ರಮವಾಗಿ ನಂ. 5 ಮತ್ತು ನಂ. 6 ಸ್ಥಾನಗಳಲ್ಲಿ ಸೂರ್ಯಕುಮಾರ್ ಯಾದವ್ ಅವರೊಂದಿಗೆ ಜೋಡಿಯಾಗಿ ಬ್ಯಾಟಿಂಗ್ ಅಭ್ಯಾಸವನ್ನು ಮಾಡಿಸಲಾಯಿತು. ಅಭ್ಯಾಸದಲ್ಲಿ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಜೊತೆಗೆ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ನಂ.4 ರಲ್ಲಿ ಅಭ್ಯಾಸ ನಡೆಸಿದರು.