ಬೆಂಗಳೂರು: ರಾಜ್ಯಪಾಲರ ಹೆಸರು ಬಳಸಿಕೊಂಡು ನಕಲಿ ಫೇಸ್ಬುಕ್ ಖಾತೆ ಓಪನ್ ಮಾಡಲಾಗಿದೆ. ಕೆಲ ಸೈಬರ್ ಚೋರರು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಹೆಸರು ಬಳಸಿಕೊಂಡು ನಕಲಿ ಫೇಸ್ಬುಕ್ ಖಾತೆ ತೆರೆದಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಫೋಟೋ, ಹೆಸರು ಬಳಸಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದಾರೆ.
ಸದ್ಯ ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ದೂರು ದಾಖಲಿಸಿದ್ದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಯಾರೂ ಅಪರಿಚಿತ ವ್ಯಕ್ತಿ ಕರ್ನಾಟಕದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಹೆಸರು ಮತ್ತು ಫೋಟೋವನ್ನು ಬಳಸಿಕೊಂಡು ನಕಲಿ ಫೇಸ್ ಬುಕ್ ಖಾತೆಯನ್ನು ತೆರೆದು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಈ ರೀತಿ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ದೂರು ಸಲ್ಲಿಸಿದ್ದಾರೆ.