ಲಖನೌ;- ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮ ಕುರಿತ ಹೇಳಿಕೆಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಅನಾದಿ ಕಾಲದಿಂದಲೂ ಸನಾತನ ಧರ್ಮದ ಮೇಲೆ ಹಲವು ದಾಳಿಗಳಾಗಿವೆ. ಆದರೆ ಧರ್ಮಕ್ಕೆ ಹಾನಿ ಮಾಡಲು ಅವುಗಳಿಂದ ಸಾಧ್ಯವಾಗಿಲ್ಲ. ಅಧಿಕಾರಕ್ಕಾಗಿ ಹಪಾಹಪಿಸುತ್ತಿರುವ ಪರವಾಲಂಬಿಗಳಿಂದ ಈಗಲೂ ಅದು ಸಾಧ್ಯವಿಲ್ಲ’ ಎಂದರು.
ರಾವಣನ ದುರಹಂಕಾರ ಸನಾತನ ಧರ್ಮವನ್ನು ಅಳಿಸಲಾಗಲಿಲ್ಲ. ಕಂಸನ ಘರ್ಜನೆ ಧರ್ಮವನ್ನು ಅಲುಗಾಡಿಸಲಾಗಲಿಲ್ಲ. ಬಾಬರ್ ಮತ್ತು ಔರಂಗಜೇಬನ ದೌರ್ಜನ್ಯಗಳೂ ಸನಾತನ ಧರ್ಮವನ್ನು ಏನೂ ಮಾಡಲು ಆಗಲಿಲ್ಲ. ಈಗ ಈ ಅಧಿಕಾರ ದಾಹವುಳ್ಳ ಕ್ಷುಲ್ಲಕ ಪರಾವಲಂಬಿ ಜೀವಿಗಳಿಂದ ಅಳಿಸಿಹಾಕಲು ಸಾಧ್ಯವೇ?’ ಎಂದು ಪ್ರಶ್ನಿಸಿದ್ದಾರೆ.
ಸಮಾನತೆ, ಸಾಮಾಜಿಕ ನ್ಯಾಯದ ವಿರುದ್ಧ ಸನಾತನ ಧರ್ಮವಿದೆ ಎಂದು ಆರೋಪಿಸಿದ್ದ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್, ಅದನ್ನು ಡೆಂಗಿ ಮತ್ತು ಮಲೇರಿಯಾಗೆ ಹೋಲಿಸಿ, ನಿರ್ಮೂಲನೆಗೆ ಅಗತ್ಯ ಎಂದಿದ್ದರು ಎಂದು ವರದಿಯಾಗಿತ್ತು.
ಯೋಗಿ ಆದಿತ್ಯನಾಥ್ ಅವರು ಯಾರ ಹೆಸರನ್ನೂ ತೆಗೆದುಕೊಳ್ಳದೇ, ‘ಸತಾನ ಧರ್ಮದ ಮೇಲೆ ದುರುದ್ದೇಶಪೂರಿತ ದಾಳಿ ನಡೆಸುವ ಮೂಲಕ ಮಾನವೀಯತೆಯನ್ನೇ ತೊಂದರೆಗೆ ಸಿಲುಕಿಸವ ಪ್ರಯತ್ನ ನಡೆಸಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.